ರಾಜ್ಯ

ಸ್ಪೀಕರ್‌ ಯು.ಟಿ.ಖಾದರ್‌ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

ಬೆಂಗಳೂರು: ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಾಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ ಮಾಡಿದ್ದಾರೆ.

ಯು.ಟಿ.ಖಾದರ್‌ ಇತ್ತೀಚೆಗೆ ಲೂಟಿ ಖಾದರ್‌ ಆಗಿದ್ದಾರೆ. ಅವರ ಘನತೆಗೆ, ಸ್ಥಾನಮಾನಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಪ್ರತಿಯೊಂದು ನಡವಳಿಕೆಯೂ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದ್ದು, ಇದರ ಬಗ್ಗೆ ತನಿಖೆಯ ಅಗತ್ಯವಿದೆ. ವಿಧಾನಸಭೆಯ ಇತಿಹಾಸದಲ್ಲೇ ಸ್ಪೀಕರ್‌ ಮೇಲೆ ಇಂತಹ ಆರೋಪಗಳು ಮೊದಲ ಬಾರಿಗೆ ಬಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ: ಎಸ್‌ಐಆರ್ ಜಾರಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಕ್ರೋಶ

ಕರ್ನಾಟಕ ವಿಧಾನಸಭೆಗೆ ತನ್ನದೇ ಆದ ಗೌರವ ಇದೆ. ಆದರೆ ಖಾದರ್‌ ಅವರು ತಮ್ಮ ಪೀಠದ ಗೌರವವನ್ನು ಕಾಪಾಡುತ್ತಿಲ್ಲ. ಅವರು ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇದು ಹಲವು ಶಾಸಕರ ಅಭಿಮತವೂ ಹೌದು! ಇದಲ್ಲದೇ ಅವರ ಆಡಳಿತ ಸುಧಾರಣೆ ಹೆಸರಿನಲ್ಲಿ ಮಾಡುತ್ತಿರುವ ಕಾರ್ಯವೈಖರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ವಿಧಾನಸೌಧದ ಸಭಾಂಗಣದ ಬಾಗಿಲಿಗೆ ರೋಸ್‌‍ವುಡ್‌ ಹಾಕಿದ್ದು, ಹೊಸ ಟಿವಿ ಖರೀದಿ, ಶಾಸಕರ ಮಸಾಜ್‌ ಛೇರ್‌, ಗಂಡಬೇರುಂಢ ಗಡಿಯಾರ, ಊಟ ಉಪಹಾರ. ಹೀಗೆ ಹಲವು ವಿಚಾರಗಳು ಭ್ರಷ್ಟಾಚಾರದ ಆರೋಪಕ್ಕೆ ಪುಷ್ಟಿ ನೀಡಿವೆ ಎಂದರು.

ಸಭಾಧ್ಯಕ್ಷರ ಭ್ರಷ್ಟಾಚಾರದ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ಪತ್ರ ಮೂಲಕ ತರುತ್ತೇನೆ. ಯು.ಟಿ.ಖಾದರ್‌ ಈಗ ಲೂಟಿ ಖಾದರ್‌ ಎಂಬ ಹಂತಕ್ಕೆ ತಲುಪಿದ್ದಾರೆ ಎಂದು ಜನರೇ ಆರೋಪ ಮಾಡುತ್ತಿದ್ದಾರೆ. ಇವೆಲ್ಲದಕ್ಕೂ ಖಾದರ್‌ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

9 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

10 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

12 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

12 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

14 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

14 hours ago