ರಾಜ್ಯ

ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ ನೋಟಿಸ್ ಹೊರಡಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಹೊಳೆ ನರಸೀಪುರ ಪೊಲೀಸ್‌ ಠಾಣೆ ಹಾಗೂ ಬೆಂಗಳೂರಿನ ಸಿಐಡಿ ದಾಖಲಿಸಿರುವ ಮೂರು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿಂತೆ ಜಾಮೀನು ನೀಡುವಂತೆ ಪ್ರಜ್ವಲ್‌ ಪರ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು.

ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರಾದ ಗಜಾನನ ಭಟ್‌ ಅವರು, ಪ್ರಾಸಿಕ್ಯೂಷನ್‌ ನೋಟಿಸ್‌ ಹೊರಡಿಸಲು ಆದೇಶ ನೀಡಿದರು. ಹಾಗೂ ಈ ಪ್ರಕರಣ ವಿಶೇಷ ಪ್ರಾಸಿಕ್ಯೂಟರ್‌ಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಇದೆ ಮೇ.31ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

8 mins ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

2 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

2 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

2 hours ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

2 hours ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

2 hours ago