Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಕಲ್ಬುರ್ಗಿ-ಗೌರಿ ಹತ್ಯೆ ತನಿಖೆಗೆ ವಿಶೇಷ ಕೋರ್ಟ್‌: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸಾಹಿತಿ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿಸಲು ರಾಜ್ಯದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಾಹಿತಿ ಎಂ.ಎಂ.ಕಲ್ಬರ್ಗಿ ಅವರನ್ನು 2015ರ ಆಗಸ್ಟ್‌ ತಿಂಗಳಲ್ಲಿ ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆ ಮಾಡಲಾಗಿತ್ತು. ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು 2017 ಸೆಪ್ಟೆಂಬರ್‌ ತಿಂಗಳಲ್ಲಿ ಬೆಂಗಳೂರಿನ ತಮ್ಮ ನಿವಾಸದ ಬಳಿ ಕೊಲೆ ಮಾಡಲಾಗಿತ್ತು.

ಎರಡೂ ಕೃತ್ಯಗಳನ್ನೆಸಗಿದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿದ್ದು, ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್‌ ಸರ್ಕಾರಕ್ಕೆ ಮನವಿ ಮಾಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ