ಬೆಂಗಳೂರು: ಸಾಹಿತಿ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿಸಲು ರಾಜ್ಯದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಾಹಿತಿ ಎಂ.ಎಂ.ಕಲ್ಬರ್ಗಿ ಅವರನ್ನು 2015ರ ಆಗಸ್ಟ್ ತಿಂಗಳಲ್ಲಿ ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆ ಮಾಡಲಾಗಿತ್ತು. ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು 2017 ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರಿನ ತಮ್ಮ ನಿವಾಸದ ಬಳಿ ಕೊಲೆ ಮಾಡಲಾಗಿತ್ತು.
ಎರಡೂ ಕೃತ್ಯಗಳನ್ನೆಸಗಿದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿದ್ದು, ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸರ್ಕಾರಕ್ಕೆ ಮನವಿ ಮಾಡಿದ್ದರು.
ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…