ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾಗೇಡು ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾಗೇಡು ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ತ್ವರಿತಗತಿ ನ್ಯಾಯಾಲಯ
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದ ಮಾನ್ಯಾಳ ಮರ್ಯಾದೆಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದಿದ್ದಾರೆ.
ಹೆಣ್ಣು ಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ-ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳ ತಡೆಗೆ ವಿಶೇಷ ಕಾನೂನು ರಚನೆ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…
ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…