Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಲ್ಲಿ ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು:  ಹೋಟೆಲ್‌ ಹಾಗೂ ರೇಸ್ಟೊರೆಂಟ್‌ಗಳಲ್ಲಿ ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುವುದು ಸಾಮಾನ್ಯವಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿ ಕೆಲವು ರೋಗ ರುಜುನುಗಳು ಹರಡಲಿವೆ. ಹೀಗಾಗಿ ರಾಜ್ಯ ಆಹಾರ ಇಲಾಖೆಯು ಎಚ್ಚೆತ್ತು  ಕೃತಕ ಬಣ್ಣ ಹಾಗೂ ರಾಸಾಯನಿಕ  ಬಳಸುವ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ದಿಢೀರ್‌ ದಾಳಿ ಮಾಡಿ ಕಾರ್ಯಚರಣೆ ನಡೆಸಲು ಮುಂದಾಗಿದೆ.

ಇದೇ ತಿಂಗಳ ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್​​ಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿಗಳು  ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸುತ್ತಾರೆ. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬಂದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಅಸುರಕ್ಷಿತವೆಂದು ಕಂಡುಬಂದ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಫಂಗಸ್ ಬೆಳವಣಿಗೆಯೂ ಪತ್ತೆಯಾಗಿದೆ. 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಣಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜನರೇ ಅಹಾರದ ಗುಣಮಟ್ಟ ಪರೀಕ್ಷೆ ಮಾಡಿಕೊಳ್ಳುವ ಸಲುವಾಗಿ ಹೋಟೆಲ್, ರೆಸ್ಟೋರೆಂಟ್, ಫುಡ್​ಪಾರ್ಕ್​​ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್​​ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

 

Tags: