ಬೆಂಗಳೂರು: ಹೋಟೆಲ್ ಹಾಗೂ ರೇಸ್ಟೊರೆಂಟ್‌ಗಳಲ್ಲಿ ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುವುದು ಸಾಮಾನ್ಯವಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿ ಕೆಲವು ರೋಗ ರುಜುನುಗಳು ಹರಡಲಿವೆ. ಹೀಗಾಗಿ ರಾಜ್ಯ ಆಹಾರ ಇಲಾಖೆಯು ಎಚ್ಚೆತ್ತು ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುವ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ದಿಢೀರ್ ದಾಳಿ ಮಾಡಿ ಕಾರ್ಯಚರಣೆ ನಡೆಸಲು ಮುಂದಾಗಿದೆ.
ಇದೇ ತಿಂಗಳ ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್ಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಆಹಾರ ಇಲಾಖೆಯ ಅಧಿಕಾರಿಗಳು ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸುತ್ತಾರೆ. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬಂದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.
ಅಸುರಕ್ಷಿತವೆಂದು ಕಂಡುಬಂದ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಫಂಗಸ್ ಬೆಳವಣಿಗೆಯೂ ಪತ್ತೆಯಾಗಿದೆ. 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಣಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜನರೇ ಅಹಾರದ ಗುಣಮಟ್ಟ ಪರೀಕ್ಷೆ ಮಾಡಿಕೊಳ್ಳುವ ಸಲುವಾಗಿ ಹೋಟೆಲ್, ರೆಸ್ಟೋರೆಂಟ್, ಫುಡ್ಪಾರ್ಕ್ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…