ಶ್ರೀ ಸಿದ್ದಗಂಗಾ ಮಠದಲ್ಲಿ ಸಂಕ್ರಾತಿ ಸಡಗರ; ಎಳ್ಳು-ಬೆಲ್ಲ ಇಟ್ಟು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಅಲಂಕಾರ

ತುಮಕೂರು: ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ದಗಂಗಾ ಮಠದಲ್ಲಿ ಕೂಡ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿದೆ. ಎಳ್ಳು, ಬೆಲ್ಲ, ಕಬ್ಬು, ಕಡಲೆಕಾಯಿ, ಅವರೆಕಾಯಿ ಸೇರಿದಂತೆ ಸಾಂಪ್ರದಾಯಿಕ ತಿನಿಸುಗಳನ್ನು ಇಟ್ಟು ಗದ್ದುಗೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಂಕ್ರಮಣ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೂ ವಿಶೇಷ ಪೂಜೆ ಹೋಮ-ಹವನ ನೆರವೇರಿಸಲಾಗಿದೆ. ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಎಂದಿನಂತೆ ಶಿವ ಪೂಜೆ ನೆರವೇರಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹೀಗಾಗಿ ಶ್ರೀಮಠದ ಮಕ್ಕಳಿಗೆ ಎಳ್ಳು-ಬೆಲ್ಲ ನೀಡಿ ಸಂಕ್ರಾಂತಿಯನ್ನು ಆಚರಣೆ ಮಾಡಲಾಗಿದೆ.

 

× Chat with us