ರಾಜ್ಯ

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಲು ಸೂಚನೆ:ಇದಕ್ಕೆ ಸ್ಪಂದಿಸಿದ ಪರಿಸರ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಳಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅವರ ಅಧ್ಯಕ್ಷತೆಯಲ್ಲೇ ಬೆಂಗಳೂರು ನಗರದ ಎಲ್ಲ ಜನಪ್ರತಿನಿಧಿಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

40 mins ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 hours ago