Speculative journalism is a danger to society siddaramaiah
ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.
ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಪ್ರಜಾಪ್ರಭುತ್ವವಾದಿಯಾಗಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನು ಬೆಂಬಲಿಸುತ್ತೇನೆ. ಆದರೆ ಊಹೆಯ ಪತ್ರಿಕೋದ್ಯಮ ಅಪಾಯಕಾರಿ ಎಂದರು.
ಪತ್ರಕರ್ತರು ತನಿಖೆ ಮಾಡಬೇಕು. ಆಗ ಸತ್ಯ ಗೊತ್ತಾಗುತ್ತದೆ. ಒಂದು ವೇಳೆ ಗೊತ್ತಾಗದೇ ಇದ್ದರೂ ಕನಿಷ್ಠ ಗಂಭೀರ ಪ್ರಯತ್ನ ನಡೆದಿರುವುದಾದರೂ ಗಮನಕ್ಕೆ ಬರುತ್ತದೆ. ಸತ್ಯ ಪತ್ತೆ ಹಚ್ಚುವ ಪ್ರಯತ್ನವನ್ನೇ ಮಾಡದೇ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದು ಸರಿಯಲ್ಲ. ಅದು ಸತ್ಯ ಅಲ್ಲ ಎಂದು ಗೊತ್ತಾಗುತ್ತಿದ್ದಂತೆ ಏಕಾಏಕಿ ಅದನ್ನು ಬದಲಾವಣೆ ಮಾಡಲಾಗುತ್ತದೆ. ಇದು ಸಮಾಜಕ್ಕೆ ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದರು.
ಜಾಗತಿಕವಾಗಿ 180 ರಾಷ್ಟ್ರಗಳಲ್ಲಿ ಭಾರತ ಪತ್ರಿಕಾ ಸ್ವಾತಂತ್ರ್ಯದಲ್ಲಿ 150ನೇ ಸ್ಥಾನದಲ್ಲಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸುಳ್ಳು ಸುದ್ದಿಗಳನ್ನು ಹತ್ತಿಕ್ಕಿ ನಿಜವಾದ ಸುದ್ದಿ ಸಮರ ಮುಂದುವರೆಯಬೇಕು ಎಂದು ಆಶಿಸಿದರು.
ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್, ಸಾಹಿತಿ ರೆಹಮತ್ ತರೀಕರೆ, ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯಿಷಾ ಖಾನಂ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಪ್ರಭಾಕರ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ, ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…