ರಾಜ್ಯ

ಅಧಿಕಾರಿಗಳು ರೈತರ ಶ್ರೇಯೋಭಿವೃದ್ದಿಗೆ ಶ್ರಮಿಸಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister Of Agriculture) ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದರು.

ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ. ಹೀಗಾಗಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಾಕೀತು ನೀಡಿದರು.

ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಗೆ ಅಭಿನಂದಾನಾರ್ಹವಾಗಿದೆ. ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೆ ರೀತಿಯ ಪ್ರಗತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು.

ಕೃಷಿ ವಿಶ್ವವಿದ್ಯಾನಿಲಯಗಳು ನಡೆಸುವ ಸಂಶೋಧನಾ ಫಲ ರೈತರಿಗೆ ಸುಲುಭವಾಗಿ ತಲುಪುವಂತಾಗಬೇಕು. ಬೇಸಾಯದಲ್ಲಿ ತಂತ್ರಜ್ಞಾನ, ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಅಳವಡಿಕೆಯಾಗಬೇಕು. ರೈತ ಕರೆ ಕೇಂದ್ರದಲ್ಲಿ ತಂತ್ರಾಂಶ ಸುಧಾರಣೆಯಾಗಬೇಕು, ಕೃಷಿಕರಿಗೆ ನಿಖರವಾದ ಮಾರ್ಗದರ್ಶನ ನೀಡಬೇಕು, ಆ ಮೂಲಕ ಕೃಷಿಕರ ಆರ್ಥಿಕ ಸುಧಾರಣೆಗೆ ನೆರವಾಗಬೇಕು ಎಂದು ಸಚಿವರು ಸಲಹೆ ನೀಡಿದರು.

ತೊಗರಿ ಮುಂಚೂಣಿಗೆ ಗುರಿ
ರಾಜ್ಯದಲ್ಲಿ ತೊಗರಿ ಬೆಳೆಯಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ಗುರಿಹೊಂದಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಿ ರೈತರಿಗೆ ನೆರವಾಗಬೇಕು ಎಂದರು.

ಎಲ್ಲಾ ಕ್ಷೇತ್ರಗಳಿಗೂ ಕೃಷಿ ಭಾಗ್ಯ ಯೋಜನೆ ವಿಸ್ತರಿಸಲಾಗಿದೆ. ಸಾವಯವ ಮತ್ತು ಸಮಗ್ರ ಬೇಸಾಯ ಪದ್ದತಿ ಪ್ರೋತ್ಸಾಹಕ್ಕೂ ಯೋಜನೆ ಜಾರಿಗೊಳಿಸಲಾಗಿದೆ. ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದು ಹೇಳಿದರು.

ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸುತ್ತಿದೆ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಸಾಧನಗಳನ್ನು ಕೊಳ್ಳಲು ಇದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ. ಜೊತೆಗೆ ಪೂರೈಕೆ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಕೃಷಿ ಸಚಿವರು ಸೂಚನೆ ನೀಡಿದರು.

ಇದನ್ನೂ ಓದಿ:-  ಪೋಷಕರಿಗೆ ಗುಡ್‌ನ್ಯೂಸ್:‌ 1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ

ಕೃಷಿ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್ ಹಾಗೂ ಆಯುಕ್ತರಾದ ವೈ.ಎಸ್.ಪಾಟೀಲ್ ಮಾತನಾಡಿ ಕಾರ್ಯಾಗಾರದ ಉದ್ದೇಶ ಸರ್ಕಾರದ ನಿರೀಕ್ಷೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಇದೇ ವೇಳೆ 2024-25ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ:- ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ವಿಫಲ

ಜಲಾನಯನ ಇಲಾಖೆ ಆಯುಕ್ತರಾದ ಮಹೇಶ್ ಶಿರೂರು, ನಿರ್ದೇಶಕ ಭಂಥನಾಳ, ಕೃಷಿ ನಿರ್ದೇಶಕ ಡಾ|| ಜಿ.ಟಿ.ಪುತ್ರ, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮನ ರೆಡ್ಡಿ ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

4 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

13 hours ago