ಬೆಂಗಳೂರು: ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಗುಟ್ಕಾ, ತಂಬಾಕು ಉಗುಳುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು, ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಇನ್ಮುಂದೆ ಭಾರೀ ದಂಡ ತೆರಬೇಕಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಾರ್ವಜನಿಕ ಸ್ಥಳಗಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ ಉಗುಳಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ಈ ಬಗ್ಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಸಿಗೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ-ಕರ್ನಾಟಕ ತಿದ್ದುಪಡಿ ಮಸೂದೆ-2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ.23ರಂದು ಅಂಕಿತ ಹಾಕಿದ್ದು, ಈ ಕುರಿತು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ.
ಇದನ್ನೂ ಓದಿ:- ಪಿರಿಯಾಪಟ್ಟಣ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅಲ್ಲದೇ ಹೋಟೆಲ್, ಪಬ್, ಬಾರ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆಗೂ ನಿಷೇಧ ಹೇರಲಾಗಿದೆ.
ಒಂದು ವೇಳೆ ನಿಯಮ ಉಲ್ಲಂಘಿಸಿದರೆ 50,000 ರೂಪಾಯಿಯಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.



