ರಾಜ್ಯ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ, ತಂಬಾಕು ಉಗುಳಿದರೆ 1000 ರೂ ದಂಡ: ರಾಜ್ಯ ಸರ್ಕಾರ ಅಧಿಸೂಚನೆ

ಬೆಂಗಳೂರು: ಎಲ್ಲೆಂದರಲ್ಲಿ ಸಿಗರೇಟ್‌ ಸೇದಿ ಗುಟ್ಕಾ, ತಂಬಾಕು ಉಗುಳುವವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಸೇದುವುದು, ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಇನ್ಮುಂದೆ ಭಾರೀ ದಂಡ ತೆರಬೇಕಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸಾರ್ವಜನಿಕ ಸ್ಥಳಗಲ್ಲಿ ಸಿಗರೇಟ್‌ ಸೇದಿದರೆ, ಗುಟ್ಕಾ ಉಗುಳಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ಈ ಬಗ್ಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಸಿಗೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ-ಕರ್ನಾಟಕ ತಿದ್ದುಪಡಿ ಮಸೂದೆ-2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ.23ರಂದು ಅಂಕಿತ ಹಾಕಿದ್ದು, ಈ ಕುರಿತು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ.

ಇದನ್ನೂ ಓದಿ:- ಪಿರಿಯಾಪಟ್ಟಣ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅಲ್ಲದೇ ಹೋಟೆಲ್, ಪಬ್‌, ಬಾರ್‌ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆಗೂ ನಿಷೇಧ ಹೇರಲಾಗಿದೆ.

ಒಂದು ವೇಳೆ ನಿಯಮ ಉಲ್ಲಂಘಿಸಿದರೆ 50,000 ರೂಪಾಯಿಯಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

35 mins ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

40 mins ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

45 mins ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

51 mins ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

11 hours ago