Columbus
15
broken clouds

Social Media

ಶನಿವಾರ, 30 ಮೇ 2026
Light
Dark

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದೀಗ ಶ್ರೀಗಳ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆಯಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

 

 

 

 

Tags:
error: Content is protected !!