Mysore
22
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ಶ್ರೀರಾಮುಲು, ಜನಾರ್ಧನ ರೆಡ್ಡಿ ಜಟಾಪಟಿ: ಆರ್‌ಎಸ್‌ಎಸ್‌ ಮಧ್ಯಪ್ರವೇಶ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣಗಳ ಗುದ್ದಾಟದ ಮಧ್ಯೆ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವೆ ಜಟಾಪಟಿಯಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್‌ ಅನ್ನು ಕಡಿಮೆ ಮಾಡಲು ಕೊನೆಗೂ ಆರ್‌ಎಸ್‌ಎಸ್‌ ಮಧ್ಯಪ್ರವೇಶ ಪ್ರವೇಶಿಸಲು ಮುಂದಾಗಿದೆ.

ಕಳೆದ ಒಂದು ವರ್ಷದ ಹಿಂದೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ರಾಜೇಶ್‌ ರಾಜೀನಾಮೆ ನೀಡಿದ್ದರು. ಆದರೆ ಆ ಸ್ಥಾನಕ್ಕೆ ಇದುವರೆಗೂ ಯಾರನ್ನು ನೇಮಕ ಮಾಡಿರಲಿಲ್ಲ. ಇದೀಗ ಬಿಜೆಪಿ ಸಂಘಟನಾ ಕಾರ್ಯದರ್ಶಿಯನ್ನು ನೇಮಕ ಮಾಡಲು ಆರ್‌ಎಸ್‌ಎಸ್‌ ತೀರ್ಮಾನಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ನಡುವೆ ಬಣಗಳ ಗುದ್ದಾಟ ನಡೆಯುತ್ತಿದೆ. ಈ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ನಡುವೆ ಜಗಳ ಆಗುತ್ತಿದೆ. ಇದನ್ನು ತಡೆಯಲು ಆರ್‌ಎಸ್‌ಎಸ್‌, ಬಿಜೆಪಿ ಸಂಘಟನಾ ಕಾರ್ಯದರ್ಶಿಯನ್ನು ನೇಮಕ ಮಾಡಲು ನಿರ್ಧರಿಸಿದೆ. ಈ ನಿರ್ಧಾರದಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬಳಿ ಹೇಳಲು ಸಾಧ್ಯವಾಗದ ದೂರನ್ನು ಬಿಜೆಪಿ ಕಾರ್ಯದರ್ಶಿ ಬಳಿ ಹೇಳಿ ಸರಿಪಡಿಸಿಕೊಳ್ಳುವಂತೆ ಹೈಕಮಾಂಡ್‌ ಸೂಚಿಸುವ ಸಾಧ್ಯತೆಯಿದೆ.

Tags: