ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ ಶ್ರೀರಾಮುಲುರನ್ನು ರಾಧಾ ಮೋಹನ್ ದಾಸ್ ತರಾಟೆಗೆ ತೆಗೆದುಕೊಂಡರು.
ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂತು ಸೋಲಿಗೆ ಶ್ರೀರಾಮುಲು ಕಾರಣ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಭೆಯಿಂದ ಬೇಸರದಿಂದಲೇ ಹೊರ ನಡೆದ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಹೇಳಿಕೆ ಬೆನ್ನಲ್ಲೇ ಒಂದು ಕಾಲದಲ್ಲಿ ಗೆಳೆಯರಾಗಿದ್ದುಕೊಂಡು ಗಡಿನಾಡಿನಲ್ಲಿ ಬಿಜೆಪಿ ಕಟ್ಟಿದ್ದ ನಾಯಕರಿಗೆ ಏನಾಯಿತು ಎಂದು ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ.