Mysore
22
broken clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ಶ್ರೀರಾಮುಲು ಕಾಂಗ್ರೆಸ್‌ಗೆ: ಸಚಿವ ಮಹದೇವಪ್ಪ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ನಾಯಕ ಬಿ.ಶ್ರೀರಾಮಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬುದು ಕೇವಲ ಊಹಾಪೋಹ ಎಂದು ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಟ್ಟಿಹಾಕಲು ಡಿಸಿಎಂ ಡಿಕೆ ಶಿವಕುಮಾರ್‌ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ ಎಂಬುದು ಕಲ್ಪನೆಯಷ್ಟೆ. ಅಂತಹ ಯಾವದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಲು ಈ ರೀತಿಯ ತಪ್ಪು ಸಂದೇಶ ಹರಡಲಾಗುತ್ತಿದೆ ಎಂದು ದೂರಿದ ಸಚಿವರು, ನಾವೂ ಅಧಿಕಾರ ನಡೆಸುತ್ತಿದ್ದೇವೆ. ಅಹಿಂದ ನಾಯಕರಾಗಿ ಸತೀಶ ಜಾರಕಿಹೊಳಿ ಬೆಳೆಯುತ್ತಿದ್ದಾರೆ. ಹೀಗಿರುವಾಗ ಈ ಪ್ರಶ್ನೆಯ ಅಪ್ರಸ್ತುತ ಎಂದರು.

 

 

 

 

 

 

 

 

Tags:
error: Content is protected !!