Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಿದ ಶೃಂಗೇರಿ ಶಾರದಾ ಪೀಠ

ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.

ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್‌.15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುರುಷರಲ್ಲಿ ಧೋತಿ ಶಲ್ಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್-ದುಪಟ್ಟ ಅಥವಾ ಲಂಗ ದಾವಣಿಗಳಂತಹ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವಿಯ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತಿಳಿಸಿದೆ.

ಇನ್ನೂ ದೇವಾಲಯದ ಆಡಳಿತ ಮಂಡಳಿ ಸೂಚಿಸಿದ ಉಡುಪು ಧರಿಸದೇ ಬಂದರೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣ, ತುಂಗಾ ತೀರ, ಕಪ್ಪೆ ಶಂಕರನಗುಡಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಶಾರದಾ ತಾಯಿಯ ದರ್ಶನ ಮಾಡಲು ಮಾತ್ರ ಈ ನಿಯಮ ಕಡ್ಡಾಯ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಕ್ತರು ಶೃಂಗೇರಿಗೆ ಹೋಗಬೇಕಾದರೆ ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲಿ ಹೋಗಬೇಕು. ಒಂದು ವೇಳೆ ಜೀನ್ಸ್‌ ಹಾಗೂ ಟೀಶರ್ಟ್‌ಗಳಲ್ಲಿ ಹೋದರೆ ದೇವಾಲಯದ ಬಾಗಿಲ ಬಳಿಯಿಂದಲೇ ಆಚೆ ಬರಬೇಕಾಗುತ್ತದೆ ಎಂದು ತಿಳಿಸಲಾಗಿದೆ.

 

Tags: