ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್.15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುರುಷರಲ್ಲಿ ಧೋತಿ ಶಲ್ಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್-ದುಪಟ್ಟ ಅಥವಾ ಲಂಗ ದಾವಣಿಗಳಂತಹ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವಿಯ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತಿಳಿಸಿದೆ.
ಇನ್ನೂ ದೇವಾಲಯದ ಆಡಳಿತ ಮಂಡಳಿ ಸೂಚಿಸಿದ ಉಡುಪು ಧರಿಸದೇ ಬಂದರೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣ, ತುಂಗಾ ತೀರ, ಕಪ್ಪೆ ಶಂಕರನಗುಡಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಶಾರದಾ ತಾಯಿಯ ದರ್ಶನ ಮಾಡಲು ಮಾತ್ರ ಈ ನಿಯಮ ಕಡ್ಡಾಯ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಕ್ತರು ಶೃಂಗೇರಿಗೆ ಹೋಗಬೇಕಾದರೆ ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲಿ ಹೋಗಬೇಕು. ಒಂದು ವೇಳೆ ಜೀನ್ಸ್ ಹಾಗೂ ಟೀಶರ್ಟ್‌ಗಳಲ್ಲಿ ಹೋದರೆ ದೇವಾಲಯದ ಬಾಗಿಲ ಬಳಿಯಿಂದಲೇ ಆಚೆ ಬರಬೇಕಾಗುತ್ತದೆ ಎಂದು ತಿಳಿಸಲಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…