Mysore
24
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.

ಘಟನೆ ಹಿನ್ನೆಲೆ: ಸೂಳೆಬೈಲು ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂಕೇತ್‌, ಸೋಮವಾರ ಸಂಜೆ ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ. ಸಂಕೇತ್‌ ಸ್ನೇಹಿತ ಗಿರೀಶ್‌ ಎಂಬುವವನ ಮೇಲೆ ಕೆಲವು ವಿದ್ಯಾರ್ಥಿಗಳು ಜಗಳ ತೆಗೆದು ಹಲ್ಲೆ ಮಾಡುತ್ತಿದ್ದರು. ಸ್ನೇಹಿತನನ್ನು ರಕ್ಷಣೆ ಮಾಡಲು ಹೋದ ಸಂಕೇತ್‌ ಮೇಲೆ ದುಷ್ಕರ್ಮಿಗಳು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಸಂಕೇತ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

Tags:
error: Content is protected !!