ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.
ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.
ಘಟನೆ ಹಿನ್ನೆಲೆ: ಸೂಳೆಬೈಲು ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂಕೇತ್, ಸೋಮವಾರ ಸಂಜೆ ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ. ಸಂಕೇತ್ ಸ್ನೇಹಿತ ಗಿರೀಶ್ ಎಂಬುವವನ ಮೇಲೆ ಕೆಲವು ವಿದ್ಯಾರ್ಥಿಗಳು ಜಗಳ ತೆಗೆದು ಹಲ್ಲೆ ಮಾಡುತ್ತಿದ್ದರು. ಸ್ನೇಹಿತನನ್ನು ರಕ್ಷಣೆ ಮಾಡಲು ಹೋದ ಸಂಕೇತ್ ಮೇಲೆ ದುಷ್ಕರ್ಮಿಗಳು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಸಂಕೇತ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…