ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಪಿಯುಸಿ ಪರೀಕ್ಷೆ ಮಾರ್ಚ್.1ರಿಂದ 19ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್.20ರಿಂದ ಏಪ್ರಿಲ್.2ರವರೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ವೇಳಾಪಟ್ಟಿಯ ಮಾಹಿತಿಯನ್ನು ಮಕ್ಕಳಿಗೆ ನೀಡುವಂತೆ ಸೂಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ.
ಈ ಮೂಲಕ ಹೆಚ್ಚು ಕಡಿಮೆ ಇದೇ ದಿನಾಂಕಗಳಂದು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಇದಕ್ಕೆ ಸರ್ವ ರೀತಿಯಲ್ಲೂ ತಯಾರಿರಬೇಕು ಎಂದು ಸೂಚನೆ ನೀಡಲಾಗಿದೆ.





