Dhanush Tanya topers sslc
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್ಎಸ್ಎಲ್‍ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.
ಈ ಬಾರಿಯ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು ಮಾರ್ಚ್.30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ದಿನಾಂಕ ಮತ್ತು ಫಲಿತಾಂಶದ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿಯೇ ಪ್ರಕಟಿಸಿರುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಳತೆ ತಂದಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ಮತ್ತು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಹಕಾರಿಯಾಗಲಿದೆ.
ಮಾರ್ಚ್ 5ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 30ರಂದು ತೃತೀಯ ಭಾಷಾ ವಿಷಯಗಳೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…