ಬೆಂಗಳೂರು: ರಾಜ್ಯಾದ್ಯಂತ ಇದೇ ಮಾರ್ಚ 25ರಿಂದ ಏಪ್ರಿಲ್ 6ವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ನಾಳೆ (ಮೇ.9) ಬೆಳಿಗ್ಗೆ 10.30ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಎನ್. ಮಂಜುಶ್ರೀ ಪತ್ರಿಕಾಗೋಷ್ಠಿ ನಡೆಸಿ ಪರೀಕ್ಷಾ ಫಲಿತಾಂಶದ ಮಾಹಿತಿ ನೀಡಲಿದ್ದಾರೆ.
ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 4,41,910 ಬಾಲಕರು ಮತ್ತು 4,28,058 ಮಂದಿ ಬಾಲಕೀಯರು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯ ನಾಳೆ ಪ್ರಕಟಗೊಳ್ಳಲಿದೆ.
ಈ ವೆಬ್‌ಸೈಟ್ ಮೂಲಕ ನಿಮ್ಮ ರಿಸಲ್ಟ್ ನೋಡಿ: ನಾಳೆ ಬೆಳಿಗ್ಗೆ ಪತ್ರಿಕಾಗೋಷ್ಠಿ ನಂತರ ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ತಮ್ಮ ರಿಜಿಸ್ಟರ್ ನಂಬರ್ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ವಿದ್ಯಾರ್ಥಿಗಳು ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ.
ಅನುತ್ತೀರ್ಣರಾದರೇ ಭಯಪಡಬೇಕಿಲ್ಲಾ: ನಾಳೆ ಫಲಿತಾಂಶದಿಂದ ಅನುತ್ತೀರ್ಣರಾದರೇ ಮತ್ತೇನು ಮಾಡಬೇಕು ಎಂದು ವಿದ್ಯಾರ್ಥಿಗಳಾರು ಚಿಂತೆ ಮಾಡಬೇಕಿಲ್ಲ. ಸರ್ಕಾರ ಈ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದಾಗಿದೆ. ಮೊದಲೆಲ್ಲಾ ಪರೀಕ್ಷೆಯಲ್ಲಿ ಫೇಲಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಈಗ ಪಾಸಾದವರು ಸೇರಿದಂತೆ ಎಲ್ಲರೂ ಮೂರು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಫೇಲಾದವರಿಗೆ ಪಾಸಾಗಲು ಅವಕಾಶ ಸಿಕ್ಕರೇ ಇತ್ತ ಪಾಸಾದವರಿಗೆ ಹೆಚ್ಚಿನ ಅಂಕ ಗಳಿಸಲು ಇದು ಸಹಕರಿಸಲಿದೆ. ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ತಮಗೆ ಯಾವ ಅಂಕ ಸೂಕ್ತವಾಗಲಿದೆ ಅದನ್ನೆ ಅಂತಿಮ ಅಂಕ ಪಟ್ಟಿಯಲ್ಲಿ ನಮೂದಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…