ರಾಜ್ಯ

SSLC EXAM 2: ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್‌ಎಸ್ಎಲ್‌ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಮಂಡಳಿ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2 ಯನ್ನು ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯು ತನ್ನ ಜಾಲತಾಣದಲ್ಲಿ ಪ್ರಚುರಪಡಿಸಿದೆ.

ಎಸ್​ಎಸ್​​ಎಲ್​ಸಿ ಪರೀಕ್ಷೆ-2 ವೇಳಾಪಟ್ಟಿ ಇಲ್ಲಿದೆ.

ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
ಜೂನ್ 18: ಗಣಿತ/ಸಮಾಜ ಶಾಸ್ತ್ರ
ಜೂನ್ 19: ಎಲಿಮೆಂಟ್ಸ್​​ ಆಫ್​ ಮೆಕ್ಯಾನಿಕಲ್​ ಇಂಜಿನಿಯರಿಂಗ್​​ IV, ಇಂಜಿನಿಯರಿಂಗ್ ಗ್ರಾಫಿಕ್ಸ್​​2, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್​​ IV, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್​​, ಅರ್ಥಶಾಸ್ತ್ರ

ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 22: ಸಮಾಜ ವಿಜ್ಞಾನ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

2 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

7 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

7 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

7 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

18 hours ago