Concept of SSLC exam Results conducted in India, in wooden block letters on table.
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಏ.2ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪರೀಕ್ಷಾ ದಿನಾಂಕ ಮತ್ತು ಫಲಿತಾಂಶದ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿಯೇ ಪ್ರಕಟಿಸಿರುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಳತೆ ತಂದಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ಮತ್ತು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಹಕಾರಿಯಾಗಲಿದೆ.
ಮಾರ್ಚ್ 18ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 2ರಂದು ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಮುಗಿದ ತಕ್ಷಣವೇ ಏಪ್ರಿಲ್ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8 ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…