ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಎಲ್ಲವೂ ಕ್ಲಿಯರ್ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು (ಫೆ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮೂರು ಬಾರಿ ನಡೆಸಿದ ಕಾರಣದಿಂದ ಗೊಂದಲ ಮೂಡಿತ್ತು. ಆದರೆ, ಈಗ ಎಲ್ಲವೂ ಕ್ಲಿಯರ್ ಆಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟುವಾಗಿ ಹೇಳಿದ್ದಾರೆ. ಆದ್ದರಿಂದ ಈ ಬಾರಿಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಹೇಳಿದರು.
ಇನ್ನು ಹಿಜಾಬ್ ಅವಕಾಶ ಕುರಿತು ಪ್ರತಿಕ್ರಿಯಿಸದ ಸಚಿವರು, ಹಿಜಾಬ್ ವಿವಾದ ಇನ್ನು ನ್ಯಾಯಾಲಯದಲ್ಲಿದೆ. ಆದ ಕಾರಣ ಶಾಲೆಗೆ ಹಿಜಾಬ್ ಧರಿಸಿ ಬರಬೇಕೊ ಅಥವಾ ಬೇಡವೋ ಎಂದು ಗೃಹ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.