ರಾಜ್ಯ

SSLC ಪರೀಕ್ಷೆ: ಗ್ರೇಸ್‌ ಮಾರ್ಕ್ಸ್‌ ಇರಲ್ಲ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ. ಎಲ್ಲವೂ ಕ್ಲಿಯರ್‌ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು (ಫೆ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮೂರು ಬಾರಿ ನಡೆಸಿದ ಕಾರಣದಿಂದ ಗೊಂದಲ ಮೂಡಿತ್ತು. ಆದರೆ, ಈಗ ಎಲ್ಲವೂ ಕ್ಲಿಯರ್‌ ಆಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟುವಾಗಿ ಹೇಳಿದ್ದಾರೆ. ಆದ್ದರಿಂದ ಈ ಬಾರಿಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ ಎಂದು ಹೇಳಿದರು.

ಇನ್ನು ಹಿಜಾಬ್‌ ಅವಕಾಶ ಕುರಿತು ಪ್ರತಿಕ್ರಿಯಿಸದ ಸಚಿವರು, ಹಿಜಾಬ್‌ ವಿವಾದ ಇನ್ನು ನ್ಯಾಯಾಲಯದಲ್ಲಿದೆ. ಆದ ಕಾರಣ ಶಾಲೆಗೆ ಹಿಜಾಬ್‌ ಧರಿಸಿ ಬರಬೇಕೊ ಅಥವಾ ಬೇಡವೋ ಎಂದು ಗೃಹ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

1 hour ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

1 hour ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

2 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

3 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

3 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

3 hours ago