Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಮೂಲಕ, ವಿದ್ಯಾರ್ಥಿಗಳ ಒಟ್ಟು ಅಂಕಗಳ ಲೆಕ್ಕಾಚಾರದಲ್ಲಿ ತೃತೀಯ ಭಾಷೆಯ ಪ್ರಾಮುಖ್ಯತೆಯನ್ನು ಮಾರ್ಪಡಿಸಲಾಗಿದೆ. ಈ ನೂತನ ಕ್ರಮದಿಂದಾಗಿ ಪರೀಕ್ಷೆಯ ಗರಿಷ್ಠ ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿವೆ.

ಕಳೆದ ಹಲವು ದಶಕಗಳಿಂದ ಕನ್ನಡ ಪರ ಸಂಘಟನೆಗಳು ಮತ್ತು ಶಿಕ್ಷಣ ತಜ್ಞರು ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಸೇರಿಸಬಾರದು ಎಂದು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ಸ್ಪಂದಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಇನ್ನು ಮುಂದೆ ತೃತೀಯ ಭಾಷೆಯಾದ ಹಿಂದಿ (ಅಥವಾ ಯಾವುದೇ ತೃತೀಯ ಭಾಷೆ) ವಿಷಯದ ಅಂಕಗಳನ್ನು ವಿದ್ಯಾರ್ಥಿಗಳ ಒಟ್ಟು ಅಂಕಗಳ ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.

ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್‌ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.

ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಹಿಂದಿ ಭಾಷೆ ಇನ್ಮುಂದೆ ಕೇವಲ ಗ್ರೇಡ್‌ಗೆ ಸೀಮಿತ!
ಈವರೆಗಿನ ಪದ್ಧತಿಯಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಆರು ವಿಷಯಗಳಲ್ಲಿ ಒಟ್ಟು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಇದರಲ್ಲಿ ಹಿಂದಿ (ಮೂರನೇ ಭಾಷೆ) ಪತ್ರಿಕೆಯೂ ಸೇರಿತ್ತು. ಆದರೆ ಈಗಿನ ಹೊಸ ಪ್ರಸ್ತಾವನೆಯ ಪ್ರಕಾರ, ಹಿಂದಿ ಭಾಷೆಯ ಅಂಕಗಳನ್ನು ವಿದ್ಯಾರ್ಥಿಯ ಒಟ್ಟು ಶೇಕಡಾವಾರು ಲೆಕ್ಕಾಚಾರಕ್ಕೆ ತೆಗೆದುಕೊಳ್ಳಲಾಗುವುದಿಲ್ಲ. ಬದಲಾಗಿ, ಹಿಂದಿ ವಿಷಯದಲ್ಲಿ ವಿದ್ಯಾರ್ಥಿ ಪಡೆಯುವ ಅಂಕಗಳನ್ನು ಎ, ಬಿ, ಸಿ ಅಥವಾ ಡಿ ಎಂಬ ‘ಗ್ರೇಡ್’ ಮಾದರಿಯಲ್ಲಿ ನೀಡಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂಬುದು ಸರ್ಕಾರದ ಆಶಯ.

 

Tags:
error: Content is protected !!