Mysore
25
haze

Social Media

ಗುರುವಾರ, 01 ಜನವರಿ 2026
Light
Dark

SSLC EXAM | ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ; ಮಂಡಳಿ ಸ್ಪಷ್ಟನೆ

ಬೆಂಗಳೂರು:  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

ಹಿಂದಿನ ಶೈಕ್ಷಣಿಕ ಸಾಲಿನಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ ಎಂದು ಮಂಡಳಿಯ ಅಧ್ಯಕ್ಷ ಬಸವರಾಜೇಂದ್ರ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿದೆ. 2024ರ ಪರೀಕ್ಷೆ-1ಕ್ಕೆ ನೊಂದಾಯಿಸಿಕೊಂಡು ಶೇ.75ಕ್ಕಿಂತ ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆ-2 ಮತ್ತು ಪರೀಕ್ಷೆ 3ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದ್ದಾರೆ.

ಅದೇ ರೀತಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಸಹ ಈ ನಿಯಮವನ್ನೇ ಮುಂದುವರೆಸಲಾಗುವುದು ಎಂದು ಬಸವರಾಜೇಂದ್ರ ತಿಳಿಸಿದ್ದಾರೆ.

Tags:
error: Content is protected !!