Concept of SSLC exam Results conducted in India, in wooden block letters on table.
ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.
ಹಿಂದಿನ ಶೈಕ್ಷಣಿಕ ಸಾಲಿನಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ ಎಂದು ಮಂಡಳಿಯ ಅಧ್ಯಕ್ಷ ಬಸವರಾಜೇಂದ್ರ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿದೆ. 2024ರ ಪರೀಕ್ಷೆ-1ಕ್ಕೆ ನೊಂದಾಯಿಸಿಕೊಂಡು ಶೇ.75ಕ್ಕಿಂತ ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆ-2 ಮತ್ತು ಪರೀಕ್ಷೆ 3ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದ್ದಾರೆ.
ಅದೇ ರೀತಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಸಹ ಈ ನಿಯಮವನ್ನೇ ಮುಂದುವರೆಸಲಾಗುವುದು ಎಂದು ಬಸವರಾಜೇಂದ್ರ ತಿಳಿಸಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…