Mysore
20
broken clouds

Social Media

ಶನಿವಾರ, 25 ಜುಲೈ 2026
Light
Dark

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

Dhanush Tanya topers sslc

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರದ 200 ಮೀಟರ್‌ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಸಮಯದಲ್ಲಿ ಕೇಂದ್ರದ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್‌ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಜಿಲ್ಲಾಡಳಿತಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

 

Tags:
error: Content is protected !!