ರಾಜ್ಯ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಇದೇ ಆರೋಪಕ್ಕೆ ಸಿಲುಕಿದೆ.

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಮರಾಟವಾಗುತ್ತಿವೆ. ಅದರಲ್ಲೂ ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಕೆಲವರು ಪ್ರಶ್ನೆ ಪತ್ರಿಕೆಯನ್ನೇ ಟ್ಯಾಗ್ ಮಾಡಿ ಸೋರಿಕೆ ಮಾಡಿದ್ದಾರೆ.

ಪ್ರಶ್ನೆಪತ್ರಿಕೆ ಬೇಕೇ ಎಂದು ಕೇಳಲಾಗುತ್ತಿದ್ದು, ಕೇವಲ 30 ರೂ.ಕೊಟ್ಟರೆ ತಲುಪಿಸಲಾಗುವುದು ಎಂದು ಬೇಡಿಕೆ ಇಟ್ಟಿದ್ದಾರೆ. ಯಾವುದೋ ಮೊಬೈಲ್ ಪ್ರಮೋಷನ್ ವಿಡಿಯೋ ಮಾಡುವಂತೆ ಕಿಡಿಗೇಡಿಗಳು ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಬೇಕಿದ್ದರೆ ಡಿಎಂ ಮಾಡಿ ಎಂದು ಬಹಿರಂಗವಾಗಿ ಪೋಸ್ಟ್ ಹಾಕುತ್ತಿದ್ದಾರೆ.

ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 8.15ಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇಷ್ಟೆ ಅಲ್ಲದೆ, ಕ್ಯೂಆರ್ ಕೋಡ್ ಕಳುಹಿಸಿ 30 ರೂ.ಗಳಿಂದ 50 ರೂ. ಹಣ ಪಾವತಿಸಿದರೆ ಸಾಕು, ನಿಮ್ಮ ಕೈಗೆ ಪ್ರಶ್ನೆ ಪತ್ರಿಕೆ ಸೇರುತ್ತದೆ ಎಂಬ ಆಫರ್‌ಗಳು ಬರುತ್ತಿವೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ತಮ್ಮ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂತಹ ಕೃತ್ಯವೆಸಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಡಳಿ ಹೇಳುವುದೇನು?
ಈ ಆರೋಪದ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಲಾಗಿದೆ. ಐದು ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿಲ್ಲ, ಕೇವಲ ಎರಡು ಮಾತ್ರ ಸೋರಿಕೆಯಾಗಿರಬಹುದು ಎಂಬ ಅನುಮಾನವಿದೆ ಎಂದು ಮಂಡಳಿ ಹೇಳಿದೆ.

ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದು ಕೇವಲ ಹಣ ಮಾಡುವ ಉದ್ದೇಶದ ಸುಳ್ಳು ಸುದ್ದಿಯೂ ಆಗಿರಬಹುದು ಎಂದು ಮಂಡಳಿ ಶಂಕೆ ವ್ಯಕ್ತಪಡಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ವಿಷಾದಕರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…

1 hour ago

ಓದುಗರ ಪತ್ರ: ಗಡಿಭಾಗದ ಶಾಲೆಗಳಲ್ಲಿ ಕನ್ನಡ ನಿರ್ಲಕ್ಷ್ಯ ಸಲ್ಲದು

ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…

1 hour ago

ಓದುಗರ ಪತ್ರ: ಜಯಚಾಮರಾಜ ಒಡೆಯರ್ ವೃತ್ತದ ಹೆಸರು ಉಳಿಯಲಿ

ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಇಡಿ ದಾಳಿ: ಕೇಂದ್ರದ ಜೊತೆ ಮತ್ತೆ ಮಮತಾ ಜಟಾಪಟಿ

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ…

1 hour ago

ದುರಸ್ತಿಯಾದ ಬೆನ್ನಲ್ಲೇ ಗುಂಡಿಮಯವಾದ ಕರಡಿಗೋಡು ರಸ್ತೆ

ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…

1 hour ago

ಮೂಲಸೌಕರ್ಯ ವಂಚಿತ ಮುನಿಯಪ್ಪನ ದೊಡ್ಡಿ ಗ್ರಾಮ

ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ  ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ…

1 hour ago