ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಇದೇ ಆರೋಪಕ್ಕೆ ಸಿಲುಕಿದೆ.
ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಮರಾಟವಾಗುತ್ತಿವೆ. ಅದರಲ್ಲೂ ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಕೆಲವರು ಪ್ರಶ್ನೆ ಪತ್ರಿಕೆಯನ್ನೇ ಟ್ಯಾಗ್ ಮಾಡಿ ಸೋರಿಕೆ ಮಾಡಿದ್ದಾರೆ.
ಪ್ರಶ್ನೆಪತ್ರಿಕೆ ಬೇಕೇ ಎಂದು ಕೇಳಲಾಗುತ್ತಿದ್ದು, ಕೇವಲ 30 ರೂ.ಕೊಟ್ಟರೆ ತಲುಪಿಸಲಾಗುವುದು ಎಂದು ಬೇಡಿಕೆ ಇಟ್ಟಿದ್ದಾರೆ. ಯಾವುದೋ ಮೊಬೈಲ್ ಪ್ರಮೋಷನ್ ವಿಡಿಯೋ ಮಾಡುವಂತೆ ಕಿಡಿಗೇಡಿಗಳು ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಬೇಕಿದ್ದರೆ ಡಿಎಂ ಮಾಡಿ ಎಂದು ಬಹಿರಂಗವಾಗಿ ಪೋಸ್ಟ್ ಹಾಕುತ್ತಿದ್ದಾರೆ.
ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 8.15ಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇಷ್ಟೆ ಅಲ್ಲದೆ, ಕ್ಯೂಆರ್ ಕೋಡ್ ಕಳುಹಿಸಿ 30 ರೂ.ಗಳಿಂದ 50 ರೂ. ಹಣ ಪಾವತಿಸಿದರೆ ಸಾಕು, ನಿಮ್ಮ ಕೈಗೆ ಪ್ರಶ್ನೆ ಪತ್ರಿಕೆ ಸೇರುತ್ತದೆ ಎಂಬ ಆಫರ್‌ಗಳು ಬರುತ್ತಿವೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ತಮ್ಮ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂತಹ ಕೃತ್ಯವೆಸಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಂಡಳಿ ಹೇಳುವುದೇನು?
ಈ ಆರೋಪದ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಲಾಗಿದೆ. ಐದು ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿಲ್ಲ, ಕೇವಲ ಎರಡು ಮಾತ್ರ ಸೋರಿಕೆಯಾಗಿರಬಹುದು ಎಂಬ ಅನುಮಾನವಿದೆ ಎಂದು ಮಂಡಳಿ ಹೇಳಿದೆ.
ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದು ಕೇವಲ ಹಣ ಮಾಡುವ ಉದ್ದೇಶದ ಸುಳ್ಳು ಸುದ್ದಿಯೂ ಆಗಿರಬಹುದು ಎಂದು ಮಂಡಳಿ ಶಂಕೆ ವ್ಯಕ್ತಪಡಿಸಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…