ರಾಜ್ಯ

ಎಸ್‌.ಎಸ್‌.ಎಲ್.ಸಿ, ಪಿ.ಯು.ಸಿ ಪರೀಕ್ಷೆ : ತಾತ್ಕಾಲಿಕ ವೇಳಾಪಟ್ಟಿ ಪ್ರಕಣ

ಬೆಂಗಳೂರು : 2026 ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಇನ್ನೂ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ 20-09-2025ರಂದು ಪ್ರಕಟಿಸಿರುವಂತ ಈ ತಾತ್ಕಾಲಿಕ ವೇಳಾಪಟ್ಟಿಗೆ ದಿನಾಂಕ 20-09-2025ರಿಂದ 09-10-2025ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆಗಳನ್ನು chairpersonkseab@gmail.com ಗೆ ಕಳುಹಿಸುವಂತೆ ಮಂಡಳಿಯು ಸೂಚಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago