ಮೈಸೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.73.40 ಫಲಿತಾಂಶ ಬಂದಿದೆ.
ಆದರೆ ಕಳೆದ ವರ್ಷ ಶೇ. 83.89ರಷ್ಟು ಬಂದಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈ ಬಾರಿ ಕುಸಿತ ಕಂಡಿದೆ. ಅಂದರೆ ಬರೋಬ್ಬರಿ 10% ಕಳೆದ ವರ್ಷಕ್ಕಿಂತ ಕಡಿಮೆ ಫಲಿತಾಂಶ ಈ ಬಾರಿ ಬಂದಿದೆ. ಕಳೆದ ಬಾರಿ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಕಳೆದ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಮಂಡ್ಯ ಜಿಲ್ಲೆ ಈ ಬಾರಿ 19ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬರೋಬ್ಬರಿ 17 ಸ್ಥಾನ ಕುಸಿತ ಕಂಡಿದ್ದು, ಮೈಸೂರು 16ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು 7ನೇ ಸ್ಥಾನದಲ್ಲಿದ್ದ ಚಾಮರಾಜನಗರ 24ನೇ ಸ್ಥಾನಕ್ಕೆ ಕುಸಿತ ಕಂಡಿದ್ದು, 9ನೇ ಸ್ಥಾನ ಪಡೆದುಕೊಂಡಿದ್ದ ಕೊಡಗು 4ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…