sslc result
ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ. ಜತೆಗೆ ಈ ಬಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ.
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಿದರು. ಈ ಫಲಿತಾಂಶವನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕೃತ ಜಾಲತಾಣದ ಲಿಂಕ್ www.karresults.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ಪರೀಕ್ಷೆ ಬರೆದ 7,70,209 ಲಕ್ಷ ಮಕ್ಕಳಲ್ಲಿ 7,26,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಬರೋಬ್ಬರಿ ಶೇಕಡಾ 94.10 ರಷ್ಟು ಫಲಿತಾಂಶ ಬಂದಿದೆ.
7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ
ಚಿಕ್ಕಮಗಳೂರಿನ ವೃಂದ, ಬೆಂಗಳೂರು ಉತ್ತರದ ಧನುಷ್, ಉಡುಪಿ ಜಿಲ್ಲೆಯ ಪ್ರೀತಂ, ರಾಯಚೂರು ಜಿಲ್ಲೆಯ ಸುಖದೇವ್ , ದಾವಣಗೆರೆಯ ಭರತ್, ಚಿಕ್ಕೋಡಿ ಪ್ರಾರ್ಥನಾ, ವಿಜಯಪುರದ ಸೌಜನ್ಯ ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಪೂರ್ಣ ಅಂಕಗಳನ್ನು ಪಡೆದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…