Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

sslc result

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.

ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಶೇಕಡಾ 98.4 ರಷ್ಟು ಉತ್ತೀರ್ಣತೆ ದಾಖಲಿಸಿದೆ. ಇನ್ನೊಂದೆಡೆ, ಕಲಬುರಗಿ ಜಿಲ್ಲೆ ಫಲಿತಾಂಶದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದಿದ್ದು, ಇಲ್ಲಿ ಶೇಕಡಾ 85.06 ರಷ್ಟು ಫಲಿತಾಂಶ ದಾಖಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು.

Tags:
error: Content is protected !!