sslc result
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದ್ದು, ಈ ಬಾರಿಯೂ ಎಸ್ಎಸ್ಎಲ್ಸಿಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬಾಲಕಿಯರೇ ಮೇಲುಗೈ
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅದರಲ್ಲಿ 91.94 ರಷ್ಟು ಬಾಲಕರು ಉತೀರ್ಣರಾಗಿದ್ರೆ, 96.18 ವಿದ್ಯಾರ್ಥಿನಿಯರು ತೇರ್ಗಡೆಯಾಗುವ ಮೂಲಕ ದಾಖಲೆ ಫಲಿತಾಂಶ ನೀಡಿದ್ದಾರೆ.
7ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪೂರ್ಣ ಅಂಕ
ಚಿಕ್ಕೋಡಿಯ ಪ್ರಾರ್ಥನಾ, ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರಿನ ಧನುಷ್, ಉಡುಪಿಯ ಪ್ರೀತಮ್ ಪೂಜಾರಿ, ವಿಜಯಪುರದ ಸೌಜನ್ಯ, ರಾಯಯಚೂರಿನ ಸುಖದೇವ್ ಹಾಗೂ ಇನ್ನೂ ಕೆಲವರು ಪೂರ್ಣ ಅಂಕ ಪಡೆದಿದ್ದಾರೆ.
ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ – 1 ರ ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಮತ್ತು ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದಾಗಿದೆ.
ಡಿಜಿಲಾಕರ್ನಲ್ಲಿ ಅಂಕಪಟ್ಟಿ
ದ್ವಿತೀಯ ಪಿಯುಸಿಯಂತೆಯೇ 10ನೇ ತರಗತಿ ವಿದ್ಯಾರ್ಥಿಗಳಿಗೂ ಸಹ ಡಿಜಿಲಾಕರ್ನಲ್ಲಿ ಅಂಕಪಟ್ಟಿಗಳು ಲಭ್ಯವಾಗುವ ವ್ಯವಸ್ಥೆಯನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಡಿದೆ. ವಿದ್ಯಾರ್ಥಿಗಳು https://digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…