ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾಳೆ.
ಪತ್ರದಲ್ಲಿ, ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಾಳೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿದೆ ಎಂದು ವರ್ಣಿಸಿದ್ದಾಳೆ.
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಂಕಿತಾರನ್ನು ಬೆಂಗಳೂರಿಗೆ ಕರೆಸಿಕೊಂಡು ಸನ್ಮಾನಿಸಿ, ಆಕೆಯ ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಿದ್ದರು. ತನಗೆ ದೊರೆತ ಸತ್ಕಾರ, ಮುಂದಿನ ವಿದ್ಯಾಭ್ಯಾಸಕ್ಕೆ ಸಿಕ್ಕ ನೆರವಿಗೆ ಅಂಕಿತಾರವರು ಸಿಎಂಗೆ ಧನ್ಯವಾದ ತಿಳಿಸಿ ಈ ಪತ್ರ ಬರೆದಿದ್ದಾಳೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…