ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ | ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮ್ಯಾಜಿಸ್ಟೇಟ್‌ ತನಿಖಗೆ ಆದೇಶ ನೀಡಲಾಗಿದೆ ಎಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯ ಇತರ ಮುಖ್ಯಂಶಗಳು ಹೀಗಿವೆ…
ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ.

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

55 mins ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

58 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

1 hour ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

1 hour ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

1 hour ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

1 hour ago