Mysore
26
clear sky

Social Media

ಬುಧವಾರ, 25 ಮಾರ್ಚ್ 2026
Light
Dark

ಕಾಲ್ತುಳಿತ ಪ್ರಕರಣ: ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಿಸಲಾಗಿದೆ.

ಈಗಾಗಲೇ ಆರ್‌ಸಿಬಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅದೇ ಎಫ್‌ಐಆರ್‌ ಜೊತೆಗೆ ದೂರನ್ನು ಪರಿಗಣಿಸುವುದಾಗಿ ಹಿಂಬರಹ ನೀಡಲಾಗಿದೆ.

ಕಬ್ಬನ್‌ ಪಾರ್ಕ್‌ ಠಾಣೆಗೆ ನೈಜ ಹೋರಾಟಗಾರರ ವೇದಿಕೆಯಿಂದ ದೂರು ನೀಡಲಾಗಿದ್ದು, ಪೊಲೀಸರು ದೂರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ.

Tags:
error: Content is protected !!