Mysore
25
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಕಾಲ್ತುಳಿತ ಪ್ರಕರಣ: ಪಿಐಎಲ್‌ ವಿಚಾರಣೆ ಜೂನ್.‌12ಕ್ಕೆ ಮುಂದೂಡಿಕೆ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್‌ ವಿಚಾರಣೆಯನ್ನು ಹೈಕೋರ್ಟ್‌ ಜೂನ್.‌12ಕ್ಕೆ ಮುಂದೂಡಿದೆ.

ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೂನ್.‌12ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇನ್ನು ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು.

ಇಂದು ನ್ಯಾಯಮೂರ್ತಿಗಳಾದ ಕಾಮೇಶ್ವರ್‌ ರಾವ್‌ ಹಾಗೂ ಜೋಶಿ ಅವರಿದ್ದ ಪೀಠ ವಿಚಾರಣೆಯನ್ನು ಜೂನ್.12ಕ್ಕೆ ಮುಂದೂಡಿಕೆ ಮಾಡಿ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿದೆ.

Tags:
error: Content is protected !!