RCB celebration
ಬೆಂಗಳೂರು : ಕಳೆದ ತಿಂಗಳು ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿ ನ್ಯಾ.ಮೈಕಲ್ ಕುನ್ಹಾ ಅವರು ನೀಡಿರುವ ವರದಿಯನ್ನು ರಾಜ್ಯಸರ್ಕಾರ ಒಪ್ಪಿಕೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವರದಿಯ ಬಗ್ಗೆ ಚರ್ಚೆಯಾಗಿದೆ. ನ್ಯಾಯಮೂರ್ತಿಗಳು ಶಿಫಾರಸ್ಸು ಮಾಡಿದಂತೆ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಸಂಪುಟ ಸಹಮತಿಸಿದೆ ಎಂದರು.
ಕರ್ತವ್ಯ ಲೋಪ ಎಸಗಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುವುದು. ಖಾಸಗಿ ಸಂಸ್ಥೆಗಳಾದ ಆರ್.ಸಿ.ಬಿ, ಕರ್ನಾಟಕ ರಾಜ್ಯಕ್ರಿಕೆಟ್ ಸಂಸ್ಥೆ, ಡಿಎನ್‍ಎ ಸಂಸ್ಥೆಗಳ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಹಾಗೂ ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವುದಾಗಿ ಸಚಿವರು ತಿಳಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…