Mysore
20
clear sky

Social Media

ಗುರುವಾರ, 12 ಮಾರ್ಚ್ 2026
Light
Dark

Stampede in Bengaluru: ಸಿಎಂ ಸಿದ್ದರಾಮಯ್ಯ ನಿಜವಾದ ಆರೋಪಿ ಎಂದ ವಿಜಯೇಂದ್ರ

B Y Vijayendra

ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್‌ ಹಾಗೂ ಗೃಹ ಸಚಿವ ಪರಮೇಶ್ವರ್‌ ಅವರೇ ನಿಜವಾದ ಆರೋಪಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತಲೆದಂಡ ಆಗಿದೆ.

ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪ್ರಕರಣದಲ್ಲಿ ಅಧಿಕಾರಿಗಳನು ತಲೆದಂಡ ಮಾಡಲಾಗಿದೆ. ಇಂಟಲಿಜೆನ್ಸ್‌ ಅಧಿಕಾರಿಗಳನ್ನು ಯಾಕೆ ಅಮಾನತು ಮಾಡಿಲ್ಲ ಎಂದು ಪ್ರಶ್ನೆ ಮಾಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಎ1 ಆರೋಪಿಯಾಗಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್‌ ಎ2, ಗೃಹ ಸಚಿವ ಪರಮೇಶ್ವರ್‌ ಎ3 ಆರೋಪಿಯಾಗಬೇಕು. ನಿಜವಾದ ಆರೋಪಿ ಸಿದ್ದರಾಮಯ್ಯನವರೇ ಎಂದು ಗುಡುಗಿದರು.

Tags:
error: Content is protected !!