Mysore
28
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಕಾಲ್ತುಳಿತ ಪ್ರಕರಣ: ಮೃತರ ಮಾಹಿತಿ ಪ್ರಕಟಿಸಿದ ರಾಜ್ಯ ಸರ್ಕಾರ

stemped

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಮಾಹಿತಿಯನ್ನು ರಾಜ್ಯಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅವರಲ್ಲಿ ವೈದ್ಯರು, ಚಾರ್ಟೆಡ್ ಅಕೌಂಟೆಂಟ್‍ಗಳು, ಎಂಜಿನಿಯರ್‌ಗಳು, ಎಂಜಿನಿಯರ್ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದು ದುರಂತ ಜನಮಾನಸದ ಮನಕಲಕುವಂತಿದೆ.

ಬೆಂಗಳೂರಿನ ಯಲಹಂಕದ ಕಟ್ಟಿಗೇನಹಳ್ಳಿಯ ದಿವ್ಯಾಂಶಿ(14), ಉತ್ತರ ಕನ್ನಡ ಜಿಲ್ಲೆಯ ರವೀಂದ್ರ ನಗರ ನಿವಾಸಿ ಅಕ್ಷತಾ ಪೈ(26), ಬೆಂಗಳೂರಿನ ಎಂ.ಎಸ್.ರಾಮಯ್ಯ ಬಡಾವಣೆಯ ಭೂಮಿಕ್(19), ಕೋಲಾರದ ಎಸ್.ವಿ.ಲೇಔಟ್‍ನ ಸಹನಾ(23), ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಾರಾಯಣನಗರ ನಿವಾಸಿ ಚಿನ್ಮಯಶೆಟ್ಟಿ(19), ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಮೀಪದ ನಾಗಸಂದ್ರದ ಮನೋಜ್‍ಕುಮಾರ್(20), ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುಡಟಹಳ್ಳಿಯ ಕೆ.ಟಿ.ಶ್ರವಣ(20), ಯಾದಗಿರಿ ಜಿಲ್ಲೆ ಹೂನಿಗೇರಿ ಗ್ರಾಮದ ಶಿವಲಿಂಗ(17), ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ರಾಯಸಮುದ್ರ ಗ್ರಾಮದ ಪೂರ್ಣಚಂದ್ರ(20), ತಮಿಳುನಾಡು ಕೊಯಮತ್ತೂರಿನ ಉರುಮಲಪೇಟ್‍ನ ಕಾಮಾಕ್ಷಿದೇವಿ(19), ಬೆಂಗಳೂರಿನ ಯಲಹಂಕದ ನ್ಯೂಟೌನ್‍ನ ಚಿಕ್ಕಬೊಮಸಂದ್ರ ಕ್ರಾಸ್ ಬಳಿಯ ನಿವಾಸಿ ಪ್ರಜ್ವಲ್(22) ಮೃತಪಟ್ಟಿದ್ದಾರೆ.

ಗಾಯಾಳುಗಳ ವಿವರ:
ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags:
error: Content is protected !!