ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ.
ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್‌ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.
ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ ಶಂಕರ್, ಖಜಾಂಚಿ ಇ.ಎಸ್.ಜೈರಾಮ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.





