ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.
ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು.
ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.
ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಹಾಗೂ ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿತ್ತು.





