ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದಲೇ ಬಿಡುಗಡೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಜೂನ್.1, 2023ರಿಂದ ಗೋವಿಂದರಾಜ್ ಅವರನ್ನು ಸಿದ್ದರಾಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗೋವಿಂದರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.





