ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕೆಎಸ್‌ಸಿಎ ಆಡಳಿತ ಮಂಡಳಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.
ಕೆಎಸ್‌ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಜೈರಾಮ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ನಿನ್ನೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ.





